Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:11 - ಕನ್ನಡ ಸಮಕಾಲಿಕ ಅನುವಾದ

11 ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11-12 ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ನನ್ನ ಮುಖಾಂತರವಾಗಿ ನಿಮಗೆ ಪಾರಮಾರ್ಥಿಕ ವರವೇನಾದರೂ ದೊರಕಿ ನೀವು ದೃಢವಾಗುವದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ನೀವು ನನ್ನ ನಂಬಿಕೆಯಿಂದ ಸಹಾಯಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಆತ್ಮಿಕ್ ರಿತಿಚೊ ಆಶಿರ್ವಾದ್ ತುಮ್ಚ್ಯಾಕ್ನಾ ವಾಟುನ್ ಘೆವ್ನ್ ತುಮ್ಕಾ ಘಟ್ ಕರುಸಾಟ್ನಿ ಮನುನ್ ತುಮ್ಕಾ ಭೆಟುಚೆಚ್ ಮನ್ತಲಿ ಮಾಕಾ ಲೈ ಆಶಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:11
32 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು.


ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,


ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.


ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.


ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.


ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.


ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು