Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ

13 ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬರಲು ಅನೇಕ ಸಲ ಯೋಜನೆ ಮಾಡಿದೆನೆಂಬುದು ನಿಮಗೆ ತಿಳಿದಿರಲಿ. ಆದರೆ ನಿಮ್ಮ ಬಳಿಗೆ ಬರಲು ನನಗೆ ಸಾಧ್ಯವಾಗಲಿಲ್ಲ. ನಾನು ನಿಮ್ಮ ಬಳಿಗೆ ಬಂದು ನೀವು ಆತ್ಮಿಕವಾಗಿ ಬೆಳೆಯಲು ನಿಮಗೆ ಸಹಾಯ ಮಾಡಬೇಕೆಂದಿದ್ದೆನು. ನಾನು ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡಿದಂತೆಯೇ ನಿಮಗೂ ಸಹಾಯ ಮಾಡಬೇಕೆಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾಜ್ಯಾ ದೊಸ್ತಾನೊ ಮಿಯಾ ತುಮ್ಕಾ ಭೆಟುಚೆ ಮನುನ್ ಕವ್ಡೆಂದಾ ಮನ್ ಕರಲ್ಲೊ ಮನುನ್ ತುಮ್ಕಾ ಯಾದ್ ರ್‍ಹಾಂವ್ದಿತ್, ಖರೆ ಕಾಯ್ಕಿ ಮಾಕಾ ಯೆವ್ನ್ ತುಮ್ಕಾ ಭೆಟುಕ್ ಸೊಡಿನಸಿ. ಕಶೆ ದುಸ್ರ್ಯಾಕ್ಡೆ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಖರ್‍ಯಾ ದೆವಾಕ್ ವಳ್ಕಿ ಸರ್ಕೆ ಮಿಯಾ ಕರ್‍ಲಾ, ತಸೆಚ್ ತುಮ್ಚ್ಯಾತ್ಲ್ಯಾ ಲೊಕಾಕ್ನಿ ಮಾಕಾ ಜಿಕುನ್ ಘೆವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:13
38 ತಿಳಿವುಗಳ ಹೋಲಿಕೆ  

ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.


ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.


ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.


ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.


ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.


ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.


ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.


ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು