Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:15 - ಕನ್ನಡ ಸಮಕಾಲಿಕ ಅನುವಾದ

15 ಹೀಗಿರುವುದರಿಂದ ರೋಮ್ ನಗರದಲ್ಲಿರುವ ನಿಮಗೂ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನು ಉತ್ಸುಕನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೀಗಿರುವದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದಕಾರಣ ರೋಮಿನಲ್ಲಿರುವ ನಿಮಗೆ ಸುವಾರ್ತೆಯನ್ನು ತಿಳಿಸಲು ಬಹಳವಾಗಿ ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆಮನುನ್ ರೊಮ್ ಶಾರಾತ್ ಜಿವನ್ ಕರ್‍ತಲ್ಯಾ ತುಮ್ಕಾಬಿ ಬರಿ ಖಬರ್ ಸಾಂಗುಕ್ ಮಿಯಾ ಉಮ್ಮೆದಿನ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:15
12 ತಿಳಿವುಗಳ ಹೋಲಿಕೆ  

ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.


ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.


ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.


ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು