Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:17 - ಕನ್ನಡ ಸಮಕಾಲಿಕ ಅನುವಾದ

17 ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹೇಗೆಂದರೆ, ದೇವರಿಂದ ದೊರೆಯುವ ನೀತಿಯು ಅದರಲ್ಲಿ ತೋರಿಬರುತ್ತದೆ. ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುತ್ತದೆ. ಪವಿತ್ರ ಗ್ರಂಥವು ಹೇಳುವಂತೆ, “ನೀತಿವಂತನು ನಂಬಿಕೆಯಿಂದಲೇ ಜೀವಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ವಿಶ್ವಾಸಾಚ್ಯಾ ವೈನಾ ಚಾಲು ಹೊಲ್ಲ್ಯಾಕ್ನಾ ಧರುನ್ ಆಕ್ರಿ ಪತರ್ ದೆವ್ ಅಪ್ನಿ ಸ್ವತಾ ಅಪ್ನಾಚ್ಯಾ ಲೊಕಾಕ್ನಿ ಬರೆ ಜಿವನ್ ಕರ್‍ತಲ್ಯಾ ವಾಟೆರ್ ಕಶೆ ರಾಕುನ್ ಥವ್ತಾ ಮನುನ್ ಬರಿ ಖಬರ್ ದಾಕ್ವುನ್ ದಿತಾ. ಹೆ ಸುರ್ವಾತೆಕ್ನಾ ಆಕ್ರಿ ಪತರ್ ಖರೆ ಹಾಯ್. ಪವಿತ್ರ್ ಪುಸ್ತಕ್ ಮನ್ತಾ, ವಿಶ್ವಾಸಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಬರ್‍ಯಾ ವಾಟೆರ್ ಚಲ್ತಲೊ ಮಾನುಸ್ ಜಿವನ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:17
15 ತಿಳಿವುಗಳ ಹೋಲಿಕೆ  

ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.


ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು