Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:32 - ಕನ್ನಡ ಸಮಕಾಲಿಕ ಅನುವಾದ

32 ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಹ್ಯಾ ವಾಟೆನ್ ಚಲ್ತಲ್ಯಾಕ್ನಿ ಮರ್‍ನಾಚಿ ಶಿಕ್ಷಾ ಹೊತಾ, ಮನುನ್ ದೆವಾಚೊ ಖಾಯ್ದೊ ಸಾಂಗ್ತಾ. ಮನುನ್ ತೆಂಕಾ ಗೊತ್ತ್ ಹಾಯ್ ಜಾಲ್ಯಾರ್‍ಬಿ, ತೆನಿ ಹೆ ಸಗ್ಳೆ ಕರ್‍ತ್ಯಾತ್ ಎವ್ಡೆಚ್ ನ್ಹಯ್, ಹೆ ಸಗ್ಳೆ ಕರ್‍ತಲ್ಯಾ ದುಸ್ರ್ಯಾಕ್ನಿ ತೆನಿ ಅನಿ ಉಲ್ಲಿ ಉಮ್ಮೆದ್ ಭರ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:32
14 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.


ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.


ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.


ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು