Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:6 - ಕನ್ನಡ ಸಮಕಾಲಿಕ ಅನುವಾದ

6 ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಈ ಸರ್ವಜನಾಂಗಗಳಲ್ಲಿ ಸೇರಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೇಸು ಕ್ರಿಸ್ತನವರಾಗುವದಕ್ಕೆ ಕರೆಯಲ್ಪಟ್ಟ ನೀವು ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರೋಮಿನಲ್ಲಿರುವ ನೀವು ಸಹ ಯೇಸು ಕ್ರಿಸ್ತನವರಾಗುವುದಕ್ಕಾಗಿ ಕರೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಲೊಕಾತ್ನಿ ತುಮಿ ದೆವಾನ್, ಜೆಜು ಕ್ರಿಸ್ತಾಚಿ ಲೊಕಾ ಮನುನ್ ಬಲ್ವಲ್ಲಿ ರೊಮಾತ್ ಅಸಲ್ಲಿ ಲೊಕಾಬಿ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:6
16 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು