Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:7 - ಕನ್ನಡ ಸಮಕಾಲಿಕ ಅನುವಾದ

7 ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆಮನುನ್ ತುಮ್ಕಾ ಸಗ್ಳ್ಯಾಕ್ನಿ ದೆವಾನ್ ಪ್ರೆಮ್ ಕರ್‍ತಲ್ಯಾ ಅನಿ ಅಪ್ನಾಚಿ ಸ್ವತಾಚಿ ಲೊಕಾ ಮನುನ್ ಬಲ್ವುತಲ್ಯಾ ರೊಮಾತ್ಲ್ಯಾ ಲೊಕಾಕ್ನಿ ಮಿಯಾ ಲಿವ್ತಾ. ದೆವ್ ಅಮ್ಚೊ ಬಾಬಾ ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:7
70 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.


ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.


ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಇರಲಿ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರ ಸಂಗಡ ಇರಲಿ.


ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.


ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.


ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.


ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.


ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.


ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.


ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.


ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ.


“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.


ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.”


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.


ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.


ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು