Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:8 - ಕನ್ನಡ ಸಮಕಾಲಿಕ ಅನುವಾದ

8 ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪಯ್ಲೆ ಮಿಯಾ ಕ್ರಿಸ್ತಾ ವೈನಾ ತುಮ್ಚ್ಯಾಸಾಟ್ನಿ ಮಾಜ್ಯಾ ದೆವಾಕ್ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳೊ ಜಗುಚ್ ತುಮ್ಚ್ಯಾ ವಿಶ್ವಾಸಾಚ್ಯಾ ವಿಶಯಾತ್ ಆಯ್ಕುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:8
25 ತಿಳಿವುಗಳ ಹೋಲಿಕೆ  

ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಟ್ಟಿರುವ ದೇವರ ಕೃಪೆಯ ಕಾರಣಕ್ಕಾಗಿ ನಾನು ಯಾವಾಗಲೂ ನಿಮಗೋಸ್ಕರ ಅವರಿಗೆ ಕೃತಜ್ಞತೆ ಹೇಳುವವನಾಗಿದ್ದೇನೆ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.


ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು