Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:9 - ಕನ್ನಡ ಸಮಕಾಲಿಕ ಅನುವಾದ

9 ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-10 ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ನಾನು ಪ್ರಾರ್ಥನೆ ಮಾಡುವಾಗೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆಮಾಡಿ ಇನ್ನು ಮೇಲೆಯಾದರೂ ನಿಮ್ಮ ಬಳಿಗೆ ಬರುವದಕ್ಕೆ ದೇವರ ಚಿತ್ತದಿಂದ ನನಗೆ ಹೇಗೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ; ಆತನ ಮಗನ ಸುವಾರ್ತೆಯನ್ನು ಸಾರುತ್ತಾ ಆತನನ್ನೇ ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚ್ಯಾ ಲೆಕಾಚಿ ಬರಿ ಖಬರ್ ಸಾಂಗ್ತಲ್ಯಾ ವಿಶಯಾತ್ಲಿ ದೆವಾಚಿ ಸೆವಾ ಮಿಯಾ ಮಾಜ್ಯಾ ಸಗ್ಳ್ಯಾ ಮನಾನ್ ಕರುಕ್ ಲಾಗ್ಲಾ ಮನುನ್ ಮಿಯಾ ಖರೆಚ್ ಸಾಂಗ್ತಾ, ದೆವುಚ್ ಹೆಕಾ ಸಾಕ್ಷಿ, ಮಿಯಾ ಹರಿಎಗ್ದಾ ಮಾಗ್ನಿ ಕರ್‍ತಾನಾ ತುಮ್ಚಿ ಯಾದ್ ಕಾಡ್ತಾ ಮನುನ್ ದೆವಾಕ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:9
34 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.


ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.


ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು