ರೋಮಾಪುರದವರಿಗೆ 10:10 - ಕನ್ನಡ ಸಮಕಾಲಿಕ ಅನುವಾದ10 ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೃದಯದಿಂದ ನಂಬುವದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ವಿಶ್ವಾಸಾಚ್ಯಾ ವೈನಾಚ್ ಅಮಿ ದೆವಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲೆ ಮನುನ್ ಥವಲ್ಲೆ ಹಾಯ್, ಅಮಿ ಖರೆ ಹೊತ್ತೆ ವಳ್ಕುನ್ ಘೆಟಲ್ಲ್ಯಾನುಚ್ ಅಮ್ಕಾ ಬಚಾವ್ ಕರ್‍ಲ್ಯಾನಾಯ್. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.