ರೋಮಾಪುರದವರಿಗೆ 10:14 - ಕನ್ನಡ ಸಮಕಾಲಿಕ ಅನುವಾದ14 ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ತಾವು ಯಾವನನ್ನು ನಂಬಲಿಲ್ಲವೋ ಆತನ ನಾಮವನ್ನು ಹೇಳಿಕೊಳ್ಳುವದು ಹೇಗೆ? ಮತ್ತು ಆತನ ಸುದ್ದಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ? ಸಾರುವವರು ಕಳುಹಿಸಲ್ಪಡದೆ ಸಾರುವದೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ ತೆನಿ ತೆಚ್ಯಾ ವರ್‍ತಿ ವಿಶ್ವಾಸುಚ್ ಕರಲ್ಲೊ ನಸ್ಲ್ಯಾರ್ ಮಜತ್ ಕರುಕ್ ಕಶೆ ಬಲ್ವುಕ್ ಹೊತಾ? ಅನಿ ತೆನಿ ದೆವಾಚಿ ಬಾತ್ಮಿಚ್ ಆಯ್ಕಲ್ಲಿ ನಸ್ಲ್ಯಾರ್ ವಿಶ್ವಾಸ್ ತರ್ ಕಶೆ ಕರುಕ್ ಹೊತಾ? ಬಾತ್ಮಿಚ್ ಸಾಂಗುನ್ ಹೊಲ್ಲಿ ನಸ್ಲ್ಯಾರ್ ತೆನಿ ಆಯಿಕ್ತಲೆ ಕಶೆ? ಅಧ್ಯಾಯವನ್ನು ನೋಡಿ |