Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?” ಎಂದು ಯೆಶಾಯ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಸಗ್ಳೆ ಜಾನಾನಿ ಬರಿ ಖಬರ್ ಸ್ವಿಕಾರ್ ಕರುಕ್‍ನ್ಯಾತ್. ಇಸಾಯಿಯಾ ಅಪ್ನಿಚ್ ಮನ್ತಾ, “ಸರ್ವೆಸ್ವರಾ ಅಮ್ಚ್ಯಾ ಬಾತ್ಮಿ ವರ್‍ತಿ ಕೊನ್ ವಿಶ್ವಾಸ್ ಕರ್‍ಲ್ಯಾನಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:16
21 ತಿಳಿವುಗಳ ಹೋಲಿಕೆ  

ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?


ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.


ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು