ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.
ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.
ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.
ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?
“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”