Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:3 - ಕನ್ನಡ ಸಮಕಾಲಿಕ ಅನುವಾದ

3 ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವ್ ಖಲ್ಯಾ ರಿತಿನ್ ಲೊಕಾಕ್ನಿ ಅಪ್ನಾಚ್ಯಾ ವಾಂಗ್ಡಾ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆತಾ ಮನ್ತಲೆ ತೆಂಕಾ ಗೊತ್ತ್ ನತ್ತೆ, ಹೆಚ್ಯಾ ಬದ್ಲಾಕ್, ತೆನಿ ತೆಂಚ್ಯಾ ವಾಟಾಚ್ ಸಮಾ ಕರುಕ್ ಬಗಟ್ಲ್ಯಾನಿ, ಅನಿ ಹೆಕಾ ಲಾಗುನ್ ತೆನಿ ದೆವಾನ್ ಲೊಕಾಕ್ನಿ ಖರ್ಯಾ ವಾಟೆನ್ ಚಲ್ತಲಿ ಮನುನ್ ಥವ್ತಲ್ಯಾ ವಾಟೆಕ್ ತೆಂಕಾಚ್ ಒಪ್ಸುನ್ ದಿವ್ಕ್ ನ್ಯಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:3
34 ತಿಳಿವುಗಳ ಹೋಲಿಕೆ  

ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.


ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.


ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.


ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.


ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.


ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.


ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.


ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.


ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.


ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.


ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು