Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:16 - ಕನ್ನಡ ಸಮಕಾಲಿಕ ಅನುವಾದ

16 ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಣಕದಲ್ಲಿ ಮೊದಲನೆಯ ಉರುಳಿ ನೈವೇದ್ಯವಾದ ಮೇಲೆ ಕಣಕವೆಲ್ಲಾ ನೈವೇದ್ಯವಾದ ಹಾಗಾಯಿತು; ಬೇರು ದೇವರದಾಗಿದ್ದ ಮೇಲೆ ಕೊಂಬೆಗಳೂ ದೇವರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಆ ಮರದ ಕೊಂಬೆಗಳು ಸಹ ಪವಿತ್ರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅದ್ದಿಚ್ ಎಕ್ ಭಾಕ್ರಿಚೊ ತುಕ್ಡೊ ದೆವಾಕ್ ಭೆಟ್ವೆಲ್ಲೆ ರ್‍ಹಾಲ್ಯಾರ್ ಸಗ್ಳಿ ಭಾಕ್ರಿಚ್ ಪವಿತ್ರ್ ಮನುನ್ ಹೊಲಿ, ಬೆರಾ ಪವಿತ್ರ್ ಹಾತ್ ಮನುನ್ ಹೊಲ್ಯಾರ್ ತೆಚ್ಯಾ ಟಾಳಿಯಾಬಿ ಪವಿತ್ರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:16
17 ತಿಳಿವುಗಳ ಹೋಲಿಕೆ  

ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು