Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:18 - ಕನ್ನಡ ಸಮಕಾಲಿಕ ಅನುವಾದ

18 ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಮುರಿಯಲ್ಪಟ್ಟ ಆ ಕೊಂಬೆಗಳನ್ನು ಕಡೆಗಣಿಸಬೇಡಿ. ಅವುಗಳನ್ನು ಕಡೆಗಣಿಸಲು ನಿಮಗೆ ಯಾವ ಕಾರಣವೂ ಇಲ್ಲ. ಏಕೆಂದರೆ, ನೀವು ಬೇರಿಗೆ ಜೀವವನ್ನು ಕೊಡುವುದಿಲ್ಲ. ಬೇರು ನಿಮಗೆ ಜೀವವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ರ್‍ಹಾತಾನಾ ತ್ಯಾ ಕಾತ್ರುನ್ ಕಾಡಲ್ಲ್ಯಾ ಟಾಳಿಯಾಂಚ್ಯಾ ಸರ್ಕೆ ಹೊತ್ತ್ಯಾಕ್ನಿ ಕಾಡುನ್ ಟಾಕುನ್ ಹೊಯ್ನಾ. ತುಮಿ ಖಾಲಿ ಎಕ್ ಟಾಳಿ ಹೊವ್ನ್ ಹಾಶಿ ಬೆರಾನಿ ತುಮ್ಕಾ ಆಧಾರ್ ದಿವ್ಕ್ ಪಾಜೆ ಬೆರಾಚ್ ನಸ್ತಾನಾ ತುಮಿ ಕಶೆ ಮೊಟೆ ಪಾನ್ಕಿ ಬೊಲುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:18
14 ತಿಳಿವುಗಳ ಹೋಲಿಕೆ  

ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.


ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.


ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.


ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು