Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹಿತ್ತೆ ಅಮ್ಕಾ ದೆವಾಚಿ ದಯಾ ಕಶಿ ಹಾಯ್, ತೆಚೆ ಕಟೊರ್‍ಪಾನ್‍ಬಿ ಕಶೆ ಹಾಯ್ ಮನುನ್ ದಿಸುನ್ ಯೆತಾ. ವಿಶ್ವಾಸಾತ್ ಪಡುನ್ ಗೆಲ್ಲ್ಯಾಕ್ನಿ ತೊ ಕಟೊರ್, ಖರೆ ತಿಯಾ ತೆಚ್ಯಾ ದಯಾಳ್‍ಪಾನಾಚ್ಯಾ ಅಸ್ರ್ಯಾತ್ ಹಾಸ್ ಜಾಲ್ಯಾರ್ ತುಕಾ ತೊ ದಯಾಳ್‍ಪಾನ್ ದಾಕ್ವುತಾ, ನಾಹೊಲ್ಯಾರ್ ತುಕಾಬಿ ತೊ ಕಾತ್ರುನ್ ಟಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:22
33 ತಿಳಿವುಗಳ ಹೋಲಿಕೆ  

ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.


ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.


ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು