ರೋಮಾಪುರದವರಿಗೆ 11:25 - ಕನ್ನಡ ಸಮಕಾಲಿಕ ಅನುವಾದ25 ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕ್ ಘುಟಾನ್ ಹೊತ್ತೆ ಖರೆ ಹಾಯ್ ತೆ ತುಮ್ಕಾ ಗೊತ್ತ್ ರ್‍ಹಾವ್ಕ್ ಪಾಜೆ ಮನ್ತಲಿ ಎಕ್ ಮಾಜಿ ಆಶಾ, ಅನಿ ಹೆ ತುಮ್ಕಾ ತುಮಿ ಕವ್ಡೆ ಶಾನೆ ಹಾಸಿ ಮನುನ್ ಚಿಂತಲ್ಯಾತ್ನಾ ಧುರ್ ಥವ್ತಾ. ತೆ ಕಾಯ್ ಮಟ್ಲ್ಯಾರ್ , ಇಸ್ರಾಯೆಲಾಚ್ಯಾ ಲೊಕಾಂಚೆ ಮಂಡ್‍ಪಾನ್ ತಸೆಚ್ ರ್‍ಹಾಯ್ನಾ, ಜುದೆವ್ ನ್ಹಯ್ ಹೊತ್ತಿ ಸಗ್ಳಿ ಲೊಕಾ ದೆವಾಕ್ಡೆ ಯೆಯ್ ಪತರ್ ತೆ ರ್‍ಹಾತಾ ಮಾನಾ ಸರುನ್ ಜಾತಾ. ಅಧ್ಯಾಯವನ್ನು ನೋಡಿ |