Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:28 - ಕನ್ನಡ ಸಮಕಾಲಿಕ ಅನುವಾದ

28 ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶ್ಯಾಕ್ ಮಟ್ಲ್ಯಾರ್, ತೆನಿ ಬರ್‍ಯಾ ಖಬ್ರೆಕ್ ತಿರಸ್ಕಾರ್ ಕರ್‍ಲ್ಯಾನಿ, ತುಮ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಲಾಗುನ್ ಜುದೆವ್ ಲೊಕಾ ದೆವಾಚಿ ದುಸ್ಮನಾ ಹೊಲ್ಯಾತ್, ಖರೆ ದೆವಾನ್ ಎಚುನ್ ಕಾಡಲ್ಲ್ಯಾ ತೆಂಚ್ಯಾ ಘರಾನ್ಯಾಚ್ಯಾ ಅದ್ಲ್ಯಾ ಲೊಕಾಂಚ್ಯಾ ವಿಶಯಾತ್ನಾ ಬಗಟ್ಲ್ಯಾರ್ ತೆನಿ ದೆವಾಚಿ ದೊಸ್ತಾಚ್ ಮನುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:28
24 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.


ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು