ರೋಮಾಪುರದವರಿಗೆ 11:8 - ಕನ್ನಡ ಸಮಕಾಲಿಕ ಅನುವಾದ8 ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ಜನರಿಗೆ ಅರ್ಥವಾಗದಂತೆ ದೇವರು ಅವರನ್ನು ಮಂಕುಗೊಳಿಸಿದನು.” “ಅವರು ಇಂದಿನವರೆಗೂ ಕಣ್ಣಿದ್ದರೂ ಕಾಣದಂತೆ ಕಿವಿಯಿದ್ದರೂ ಕೇಳದಂತೆ ದೇವರು ಅವುಗಳನ್ನು ಮುಚ್ಚಿಬಿಟ್ಟನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪವಿತ್ರ್ ಪುಸ್ತಕ್ ಮನ್ತಾ, “ದೆವಾನ್ ತೆಂಚಿ ಮನಾ ಅನಿ ಕಾಳ್ಜಾ ಮಂದ್ ಕರ್‍ಲ್ಯಾನ್; ಆಜ್ ಬಿ ತೆಂಕಾ ದಿಸಿನಾ ನಾಹೊಲ್ಯಾರ್ ಆಯ್ಕಿನಾ” ಅಧ್ಯಾಯವನ್ನು ನೋಡಿ |