Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:1 - ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತರ್ ಮಾಜ್ಯಾ ಭಾವಾನು ಅನಿ ಭೆನಿಯಾನು, ದೆವಾನ್ ಅಮ್ಚೆ ವರ್‍ತಿ ದಾಕ್ವಲ್ಲ್ಯಾ ಮೊಟ್ಯಾ ದಯೆಚ್ಯಾ ವೈನಾ ಮಿಯಾ ತುಮ್ಚೆಕ್ಡೆ ಮಾಗ್ತಾ: ತೆಕಾ ಮಾನ್ತಾ ತಸ್ಲೆ ಎಕ್ ಪವಿತ್ರ್ ಅನಿ ಝಿತ್ತೆ ಬಲಿದಾನ್ ಕರುನ್ ತುಮ್ಕಾಚ್ ತುಮಿ ದೆವಾಕ್ ಭೆಟ್ವುನ್ ದಿವಾ, ತುಮಿ ಬೆಟ್ವುತಲಿ ಖರಿ ಬಲಿ ಹಿಚ್ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:1
49 ತಿಳಿವುಗಳ ಹೋಲಿಕೆ  

ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.


ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.


ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?


ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.


ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ.


ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.


ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.


ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.


ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.


ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು