Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:15 - ಕನ್ನಡ ಸಮಕಾಲಿಕ ಅನುವಾದ

15 ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನ್ ಸಂತೊಸಾನ್ ಹಾತ್ ತೆಂಚ್ಯಾ ವಾಂಗ್ಡಾ ಸಂತೊಸಾನ್ ರ್‍ಹಾವಾ, ರಡ್ತಲ್ಯಾಂಚ್ಯಾ ವಾಂಗ್ಡಾ ರಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:15
20 ತಿಳಿವುಗಳ ಹೋಲಿಕೆ  

ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?


ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.


ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?


ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.


ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು