Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:2 - ಕನ್ನಡ ಸಮಕಾಲಿಕ ಅನುವಾದ

2 ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:2
61 ತಿಳಿವುಗಳ ಹೋಲಿಕೆ  

ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?


ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.


ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.


ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.


ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.


ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.


ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!


ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.


ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು