Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:3 - ಕನ್ನಡ ಸಮಕಾಲಿಕ ಅನುವಾದ

3 ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ನಡಿಸಿ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ವಿಶ್ವಾಸ ಬಲವನ್ನು ಕೊಟ್ಟನೋ ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ಭಾವಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ದೆವಾಚ್ಯಾ ಕುರ್ಪೆನ್ ಮಾಕಾ ಗಾವಲ್ಲ್ಯಾ ದೆನ್ಗಿಚ್ಯಾ ಸಾಟ್ನಿ ಮಿಯಾ ತುಮ್ಕಾ ಹರಿ ಎಕ್ಲ್ಯಾಕ್ನಿ ಸಾಂಗ್ತಾ: ತುಮ್ಚ್ಯಾ ಎವ್ಡ್ಯಾಕ್ ತುಮಿ ಮೊಟೆಪಾನ್ ಚಿಂತುಕ್ ಜಾವ್‍ನಕಾಶಿ, ತುಮಿ ಚಿಂತಲ್ಯಾಕ್ ಮಿತ್ ರ್‍ಹಾಂವ್ದಿತ್, ತುಮ್ಚ್ಯಾತ್ಲೊ ಹರಿ ಎಕ್ಲೊ ದೆವಾನ್ ಅಪ್ನಾಕ್ ದಿಲ್ಲ್ಯಾ ವಿಶ್ವಾಸಾಚ್ಯಾ ಮಾಪಾಚ್ಯಾ ಪರ್‍ಕಾರ್ ಅಪ್ನಾಚ್ಯಾ ಮೊಟೆಪಾನಾಚ್ಯಾ ವಿಶಯಾತ್ ಚಿಂತುಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:3
47 ತಿಳಿವುಗಳ ಹೋಲಿಕೆ  

ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.


ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.


ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,


ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.


ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ.


ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.


ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು