ರೋಮಾಪುರದವರಿಗೆ 13:1 - ಕನ್ನಡ ಸಮಕಾಲಿಕ ಅನುವಾದ1 ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವರಿಂದ ನೇವಿುಸಲ್ಪಟ್ಟವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಹರಿ ಎಕ್ಲ್ಯಾನಿ ಅಪ್ನಾಚ್ಯಾ ವರ್‍ತಿ ಹೊತ್ತ್ಯಾ ಅದಿಕಾರ್‍ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ. ಕಶ್ಯಾಕ್ ಮಟ್ಲ್ಯಾರ್ ದೆವಾನ್ ದಿವ್‍ನಸ್ತಾನಾ ಕೊನಾಕ್‍ಬಿ ಅದಿಕಾರ್ ಗಾವಿನಾ, ಅನಿ ಅತ್ತಾ ಅಸಲ್ಲ್ಯಾ ಅದಿಕಾರ್‍ಯಾಕ್ನಿ ದೆವಾನುಚ್ ನೆಮ್ಸುನ್ ಥವ್ಲ್ಯಾನಾಯ್. ಅಧ್ಯಾಯವನ್ನು ನೋಡಿ |