ರೋಮಾಪುರದವರಿಗೆ 13:12 - ಕನ್ನಡ ಸಮಕಾಲಿಕ ಅನುವಾದ12 ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ರಾತ್ ಸರುನ್ಗೆತ್ ಯೆಲಿ, ದಿಸ್ ಉಜ್ವಾಡುನ್ಗೆತ್ ಯೆಲೊ, ತಸೆಮನುನ್ ಅಮಿ ಕಾಳೊಕಾಕ್ ಸಮಂದ್ ಪಡಲ್ಲಿ ಕಾಮಾ ಕರ್‍ತಲೆ ಸೊಡುನ್ ಸೊಡುಂವಾ, ಅನಿ ಉಜ್ವೊಡಾತ್ ಲಡಾಯಿಕ್ ನೆಸ್ತಲಿ ಕವಚಾ ಅಮಿ ನೆಸುಂವಾ. ಅಧ್ಯಾಯವನ್ನು ನೋಡಿ |