Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 13:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮಕವನ್ನು ಎದುರಿಸುತ್ತಾನೆ; ಎದುರಿಸುವವರು ಶಿಕ್ಷೆಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಸರ್ಕಾರಕ್ಕೆ ವಿರೋಧವಾಗಿರುವ ವ್ಯಕ್ತಿಯು ನಿಜವಾಗಿಯೂ ದೇವರ ಆಜ್ಞೆಗೇ ವಿರೋಧವಾಗಿದ್ದಾನೆ. ಸರ್ಕಾರಕ್ಕೆ ವಿರೋಧವಾಗಿರುವ ಜನರು ತಮ್ಮ ಮೇಲೆ ತಾವೇ ದಂಡನೆಯನ್ನು ಬರಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೊ ಕೊನ್ ಅದಿಕಾರ್ಯ್ಯಾಂಚ್ಯಾ ವಿರೊದ್ ಜಾತಾ ತೊ ದೆವಾನ್ ಕರುನ್ ಥವಲ್ಲ್ಯಾ ಯವಸ್ಥಾಚ್ಯಾ ವಿರೊದ್ ಜಾತಾ. ಅನಿ ಜೊ ಕೊನ್ ಅಶೆ ವಿರೊದ್ ಜಾತಾ ತೊ ಅಪ್ನಾಚ್ಯಾ ವರ್‍ತಿಚ್ ಶಿಕ್ಷಾ ಮಾಗುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 13:2
14 ತಿಳಿವುಗಳ ಹೋಲಿಕೆ  

ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು