ರೋಮಾಪುರದವರಿಗೆ 13:3 - ಕನ್ನಡ ಸಮಕಾಲಿಕ ಅನುವಾದ3 ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ವಾಯ್ಟ್ ಕರ್‍ತಲೆ ಅದಿಕಾರ್‍ಯಾಕ್ನಿ ಭಿಂಯಾತ್ಯಾತ್, ಬರೆ ಕರ್‍ತಲೆ ಭಿಂಯ್‍ನ್ಯಾತ್. ಅದಿಕಾರ್‍ಯಾಕ್ನಿ ಭಿಂಯ್‍ನಸ್ತಾನಾ ರಾವ್ಚೆ ಮನುನ್ ತುಮ್ಚ್ಯಾ ಮನಾತ್ ಹಾಯ್ ಕಾಯ್? ತಸೆ ಹೊಲ್ಯಾರ್ ಖಲೆ ಖರೆ ಹಾಯ್ ತೆಚ್ ಕರಾ. ತನ್ನಾ ತೊ ಅದಿಕಾರಿ ತುಕಾ ಶಾಭಾಸ್ಕಿ ದಿತಾ. ಅಧ್ಯಾಯವನ್ನು ನೋಡಿ |