ರೋಮಾಪುರದವರಿಗೆ 13:7 - ಕನ್ನಡ ಸಮಕಾಲಿಕ ಅನುವಾದ7 ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಯಾರ್ಯಾರಿಗೆ ಏನೇನು ಕೊಡಬೇಕೋ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೋ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತೆಚೆಸಾಟ್ನಿ ಜೆ ಕೊನಾ-ಕೊನಾಚೆ ತುಮಿ ದಿತಲೆ ಹಾಶಿ, ತೆ ದಿವಾ; ಸ್ವತಾಚಿ ಹೊಂವ್ದಿತ್, ಅಸ್ತಿಚಿ ತೆರ್‍ಗಿ ಹೊಂವ್ದಿತ್ ದಿವಾ, ಅನಿ ತೆಂಕಾ ಮಾನ್ ಅನಿ ಗೌರವ್ ದಿವಾ. ಅಧ್ಯಾಯವನ್ನು ನೋಡಿ |