Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:11 - ಕನ್ನಡ ಸಮಕಾಲಿಕ ಅನುವಾದ

11 ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪವಿತ್ರಗ್ರಂಥದಲ್ಲಿ : ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ, “ಸರ್ವೆಸ್ವರ್ ದೆವ್ ಮನ್ತಾ, ಮಿಯಾ ಖರೆಚ್ ಝಿತ್ತೊ ದೆವ್, ಸಗ್ಳೆ ಜಾನಾ ಮಾಜ್ಯಾ ಇದ್ರಾಕ್ ಢಿಂಬಿಯಾ ಘಾಲ್ತ್ಯಾತ್. ಅನಿ ಸಗ್ಳಿ ಲೊಕಾ ಮಿಯಾ ದೆವ್ ಮನುನ್ ಮಾಜಿ ಸುತ್ತಿ ಕರ್‍ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:11
15 ತಿಳಿವುಗಳ ಹೋಲಿಕೆ  

ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು