Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:19 - ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನಾವು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವವುಗಳನ್ನು ಸಾಧಿಸಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ರ್‍ಹಾತಾನಾ, ಅಮಿ ಸಮಾದಾನ್ ಹಾನ್ತಲ್ಯಾ ಅನಿ ಎಕಾಮೆಕಾಕ್ ಆದಾರ್ ಹೊತಲ್ಯಾ ವಿಶಯಾಂಚ್ಯಾಸಾಟ್ನಿ ರಾಬುವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:19
28 ತಿಳಿವುಗಳ ಹೋಲಿಕೆ  

ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.


ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.


ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.


ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.


ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.


ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು