Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:2 - ಕನ್ನಡ ಸಮಕಾಲಿಕ ಅನುವಾದ

2 ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಬ್ಬನು ಯಾವದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಉಲ್ಲ್ಯಾ ಲೊಕಾಕ್ನಿ ತೆಂಚೊ ವಿಶ್ವಾಸ್ ತೆನಿ ಕಾಯ್ಬಿ ಖಾಲ್ಯಾರ್ ಹೊತಾ ಮನ್ತಾ, ಖರೆ ಜೊ ಮಾನುಸ್ ವಿಶ್ವಾಸಾತ್ ಘಟ್ ನಾ ತೊ ಖಾಲಿ ತರ್‍ಕಾರಿ ಎವ್ಡೆಚ್ ಖಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:2
18 ತಿಳಿವುಗಳ ಹೋಲಿಕೆ  

ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.


ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.


ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.


“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.


ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.


ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.


ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.


ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.


ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು