Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:21 - ಕನ್ನಡ ಸಮಕಾಲಿಕ ಅನುವಾದ

21 ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:21
13 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.


ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು