Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:7 - ಕನ್ನಡ ಸಮಕಾಲಿಕ ಅನುವಾದ

7 ನಮ್ಮಲ್ಲಿ ಯಾರೂ ತಮಗಾಗಿ ಜೀವಿಸದಿರಲಿ, ತಮಗಾಗಿ ಮರಣಿಸುವುದು ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾತ್ಲೊ ಕೊನ್‍ಬಿ ಅಪ್ನಾಸಾಟ್ನಿ ಮನುನ್ ಜಿವನ್ ಕರಿನಾ ನಾಹೊಲ್ಯಾರ್ ಅಪ್ನಾಸಾಟ್ನಿ ಮನುನ್ ಮರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:7
10 ತಿಳಿವುಗಳ ಹೋಲಿಕೆ  

ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು