Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:18 - ಕನ್ನಡ ಸಮಕಾಲಿಕ ಅನುವಾದ

18 ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ದೆವಾಕ್ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರುಕ್ ಕ್ರಿಸ್ತಾನ್ ಮಾಜೆ ವೈನಾ ಕಾಮ್ ಕರ್‍ಲ್ಯಾನಾಯ್. ತೆಚೆಸಾಟ್ನಿ ಮಿಯಾ ಸಗ್ಳೆ ಫೊಡುನ್ ಬೊಲ್ತಾ. ತೆನಿ ಹೆ ಸಗ್ಳೆ ಗೊಶ್ಟಿಯಾಂಚ್ಯಾ ಅನಿ ಕಾಮಾಂಚ್ಯಾ ವೈನಾ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:18
28 ತಿಳಿವುಗಳ ಹೋಲಿಕೆ  

ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.


ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.


ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು.


ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು