Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:24 - ಕನ್ನಡ ಸಮಕಾಲಿಕ ಅನುವಾದ

24 ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನಿಮ್ಮನ್ನು ಸಂದರ್ಶಿಸುವ ನಿರೀಕ್ಷೆಯಲ್ಲಿದ್ದೇನೆ. ಸ್ವಲ್ಪಕಾಲ ನಿಮ್ಮ ಅನ್ಯೋನ್ಯತೆಯ ಆನಂದವನ್ನು ಪಡೆದ ಬಳಿಕ ಅಲ್ಲಿಗೆ ಹೋಗುವ ನನ್ನ ಪ್ರಯಾಣದಲ್ಲಿ ನಿಮ್ಮ ಸಹಕಾರವನ್ನು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಲಗ್ಗುನಾಚ್ ಮಿಯಾ ಸ್ಪೆನ್ ದೆಶಾಕ್ ಜಾತಲೊ ಹಾಂವ್, ಜಾತಾನಾ ತುಮ್ಕಾಬಿ ಮಿಯಾ ಯೆವ್ನ್ ಭೆಟುಕ್ ಹೊತಾ ಮನುನ್ ಮಾಕಾ ಬರೊಸೊ ಹಾಯ್. ಉಲ್ಲೊ ಎಳ್ ತುಮ್ಚ್ಯಾ ವಾಂಗ್ಡಾ ಖುಶಿನ್ ರ್‍ಹಾವ್ನ್, ಜಾತಾನಾ ತುಮಿ ಮಾಕಾ ಸ್ಪೆನ್ ದೆಶಾಕ್ ಜಾವ್ಕ್ ಮಜತ್ ಕರ್‍ತ್ಯಾಶಿ ಮನುನ್ ಚಿಂತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:24
9 ತಿಳಿವುಗಳ ಹೋಲಿಕೆ  

ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.


ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.


ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು