Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:3 - ಕನ್ನಡ ಸಮಕಾಲಿಕ ಅನುವಾದ

3 “ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು” ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಅಪ್ನಾಚ್ಯಾಚ್ ಬರೆಪಾನಾಚ್ಯಾ ವಿಶಯಾತ್ ಚಿಂತುಕ್ನಾ. ಹೆಚ್ಯಾ ಬದ್ಲಾಕ್, ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸರ್ಕೆ, “ದುಸ್ರ್ಯಾನಿ ತುಕಾ ಕರಲ್ಲಿ ನಿಂದಾ ಮಾಜೆ ವರ್‍ತಿ ಪಡ್ಲಿ” ಮನ್ತಲಿ ಗೊಸ್ಟ್ ತೆಕಾ ಲಾಗು ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:3
19 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.


ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು