Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:31 - ಕನ್ನಡ ಸಮಕಾಲಿಕ ಅನುವಾದ

31 ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಈ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜುದೆಯಾತ್ ಹೊತ್ತ್ಯಾ ವಿಶ್ವಾಸಾತ್ ನಸಲ್ಲ್ಯಾ ಲೊಕಾಂಚ್ಯಾ ಹಾತಾನಿತ್ಲೊ ಮಿಯಾ ಹುರುಚೊ, ಅನಿ ಮಿಯಾ ಘೆವ್ನ್ ಜಾತಲೆ ಹೆ ದಾನ್, ಜೆರುಜಲೆಮಾತ್ಲ್ಯಾ ದೆವಾಚ್ಯಾ ಲೊಕಾನಿಬಿ ಸ್ವಿಕಾರ್ ಕರಿ ಸರ್ಕೆ ಹೊಂವ್ದಿತ್ ಮನುನ್ ಮಾಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:31
18 ತಿಳಿವುಗಳ ಹೋಲಿಕೆ  

ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.


ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು.


ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.


ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.


ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.


ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು