ರೋಮಾಪುರದವರಿಗೆ 15:4 - ಕನ್ನಡ ಸಮಕಾಲಿಕ ಅನುವಾದ4 ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪವಿತ್ರ್ ಪುಸ್ತಕಾತ್ ಲಿವಲ್ಲೆ ಸಗ್ಳೆ ಅಮ್ಕಾ ಶಿಕ್ವುಸಾಟ್ನಿ ಮನುನ್ ಲಿವಲ್ಲೆ ಹಾಯ್, ಪವಿತ್ರ್ ಪುಸ್ತಕಾನ್ ದಿಲ್ಲ್ಯಾ ಉಮ್ಮೆದಿ ವೈನಾ, ಸಂಬಾಳುನ್ ಜಾತಲೆ ಶಿಕ್ವಲ್ಲ್ಯಾ ವೈನಾ ಅಮಿ ಬರೊಸೊ ಥವ್ನ್ ರ್‍ಹಾವ್‍ಸಾಟ್ನಿ ಹೆ ಸಗ್ಳೆ ಲಿವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |