Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:5 - ಕನ್ನಡ ಸಮಕಾಲಿಕ ಅನುವಾದ

5 ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಸೊಸುನ್ ಘೆವ್ನ್ ಜಾತಲ್ಯಾಚೊ, ಅನಿ ಉಮ್ಮೆದಿಚೊ ಮುಳ್ ಹೊವ್ನ್ ಹೊತ್ತೊ, ದೆವ್ ತುಮ್ಕಾ ಜೆಜು ಕ್ರಿಸ್ತಾನ್ ದಾಕ್ವುನ್ ದಿಲ್ಲಾ ಸಾರ್ಕೆ ಎಕ್ ಮನಾಚಿ ಲೊಕಾ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:5
23 ತಿಳಿವುಗಳ ಹೋಲಿಕೆ  

ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ


ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.


ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.


ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.


ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


“ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು