Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 15:7 - ಕನ್ನಡ ಸಮಕಾಲಿಕ ಅನುವಾದ

7 ದೇವರಿಗೆ ಮಹಿಮೆಯಾಗುವುದಕ್ಕಾಗಿ ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರ ಮಹಿಮೆಯನ್ನು ಪ್ರಕಾಶಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿಕೊಂಡನು. ಆದ್ದರಿಂದ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿಕೊಳ್ಳಬೇಕು. ಇದು ದೇವರಿಗೆ ಮಹಿಮೆಯನ್ನು ಉಂಟು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಮನುನ್, ಕಶೆ ಕ್ರಿಸ್ತಾನ್ ದೆವಾಚ್ಯಾ ಮಹಿಮೆಸಾಟ್ನಿ ತುಮ್ಕಾ ಸ್ವಿಕಾರ್ ಕರುನ್ ಘೆಟ್ಲ್ಯಾನಾಯ್, ತಸೆ ತುಮಿಬಿ ಎಕಾಮೆಕಾಕ್ ಸ್ವಿಕಾರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 15:7
15 ತಿಳಿವುಗಳ ಹೋಲಿಕೆ  

“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.


“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.


“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು