Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:10 - ಕನ್ನಡ ಸಮಕಾಲಿಕ ಅನುವಾದ

10 ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕ್ರಿಸ್ತನ ಸೇವೆಯಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಪೆಲ್ಲನಿಗೆ ನನ್ನ ವಂದನೆ ತಿಳಿಸಿರಿ. ಅವನು ಕ್ರಿಸ್ತನನ್ನು ನಿಜವಾಗಿಯೂ ಪ್ರೀತಿಸುತ್ತಾನೆಂಬುದನ್ನು ಪರೀಕ್ಷಿಸಿ ನಿರೂಪಿಸಲಾಗಿದೆ. ಅರಿಸ್ತೊಬೂಲನ ಕುಟುಂಬದಲ್ಲಿ ಇರುವವರಿಗೆಲ್ಲ ನನ್ನ ವಂದನೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕ್ರಿಸ್ತಾಚ್ಯಾಸಾಟ್ನಿ ಲೈ ಕಾಯ್- ಕಾಯ್ ಸೊಸಲ್ಲ್ಯಾ ಆಪೆಲ್ಲೆಸಾಕ್ ಅನಿ ಆರಿಸ್ತೊಬುಲಾಚ್ಯಾ ಕುಟ್ಮಾಚ್ಯಾಕ್ನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:10
15 ತಿಳಿವುಗಳ ಹೋಲಿಕೆ  

ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ಇವರಿಬ್ಬರ ಜೊತೆಯಲ್ಲಿ ನಾವು ನಮ್ಮ ಅನೇಕ ಅನುಭವಗಳಿಂದ ಆಸಕ್ತಿಯುಳ್ಳವನೆಂಬುದನ್ನು ದೃಢಪಡಿಸಿಕೊಂಡ ಬೇರೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಅವನು ನಿಮ್ಮ ಬಗ್ಗೆ ಪೂರ್ಣ ಭರವಸೆಯನ್ನಿಟ್ಟು ನಿಮಗೆ ನೆರವಾಗಲು ಇನ್ನೂ ಉತ್ಸುಕತೆಯಲ್ಲಿದ್ದಾನೆ.


ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.


ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.


ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು