Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:25 - ಕನ್ನಡ ಸಮಕಾಲಿಕ ಅನುವಾದ

25 ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25-26 ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25-26 ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗುನ್ ತುಮ್ಕಾ ಕಳ್ವಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಸರ್ಕೆ ಜಿವನ್ ಕರುಕ್ ಬಳ್ ಅನಿ ಘಟ್ ಮನ್ ದಿತಲ್ಯಾ ದೆವಾಕ್ ಮಹಿಮಾ ಹೊಂವ್ದಿತ್! ಜೆಜು ಕ್ರಿಸ್ತಾಚ್ಯಾ ವಿಶಯಾತ್ ಮಿಯಾ ಪರ್ಗಟ್ ಕರಲ್ಲ್ಯಾ ಸಾರ್ಕೆ ಲೈ ಕಾಲಾಂಚ್ಯಾ ಫಾಟಿ ಘುಟಾನ್ ಧಾಪುನ್ ಥವಲ್ಲಿ ಮಾಂಡಾವಳುಚ್ ಹಿ ಬರಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:25
42 ತಿಳಿವುಗಳ ಹೋಲಿಕೆ  

ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.


ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ.


ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು