ರೋಮಾಪುರದವರಿಗೆ 2:1 - ಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಇತರ ಜನರಿಗೆ ತೀರ್ಪು ಮಾಡಬಲ್ಲೆವು” ಎಂದು ನಿಮ್ಮ ವಿಷಯದಲ್ಲಿ ಯೋಚಿಸಿಕೊಳ್ಳಬೇಡಿ. ಏಕೆಂದರೆ ನೀವು ಸಹ ಪಾಪಮಾಡಿ ಅಪರಾಧಿಗಳಾಗಿದ್ದೀರಿ. ನೀವೂ ಆ ಜನರಿಗೆ ತೀರ್ಪು ಮಾಡುತ್ತೀರಿ. ಆದರೆ ಅದೇ ಕಾರ್ಯಗಳನ್ನು ನೀವೂ ಮಾಡುತ್ತೀರಿ. ಆದ್ದರಿಂದ ನೀವು ಅವರಿಗೆ ತೀರ್ಪು ಮಾಡುವಾಗ, ನಿಜವಾಗಿಯೂ ನಿಮಗೇ ತೀರ್ಪು ಮಾಡಿಕೊಳ್ಳುವವರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದುಸ್ರ್ಯಾಂಚ್ಯಾ ವಿಶಯಾತ್ನಿ ನಿರ್ನಯ್ ಕರ್‍ತಲ್ಯಾ ಮಾಜ್ಯಾ ದೊಸ್ತಾ, ತಿಯಾ ಕೊನ್ ಬಿ ರ್‍ಹಾಂವ್ದಿತ್, ತುಕಾ ಮಾಪಿ ನಾ, ಕಶ್ಯಾಕ್ ಮಟ್ಲ್ಯಾರ್, ದುಸ್ರ್ಯಾಂಚ್ಯಾ ಭುತ್ತುರ್ ಚುಕಾ ಹುಡಕ್ತಲ್ಯಾ ತುಕಾ ತಿಯಾಚ್ ಚುಕಿದಾರ್ ಮನುನ್ ನಿರ್ನಯ್ ಕರುನ್ ಘೆಟ್ಲ್ಯಾ ಸಾರ್ಕೆ ಹೊಲೆ. ಅನಿ ಎಕ್ಲ್ಯಾಂಚ್ಯಾ ಚುಕಾ ಹುಡಕ್ತಲೊ ತಿಯಾಬಿ ತೆನಿ ಕರಲ್ಲಿಚ್ ಕಾಮಾ ಕರ್ತೆಯ್. ಅಧ್ಯಾಯವನ್ನು ನೋಡಿ |
ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.