Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ದೇವರಲ್ಲಿ ಪಕ್ಷಪಾತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರಲ್ಲಿ ಪಕ್ಷಪಾತವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ಪಕ್ಷಪಾತಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ದೇವರಿಗೆ ಪಕ್ಷಪಾತವಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಆದರೆ ಧರ್ಮಶಾಸ್ತ್ರವುಳ್ಳವರಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಪಕ್ಷಪಾತ ಮಾಡದೆ ಎಲ್ಲರಿಗೂ ಒಂದೇ ರೀತಿಯಲ್ಲಿ ತೀರ್ಪು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವ್ ಸಗ್ಳ್ಯಾಕ್ನಿ ಭೆದ್‍ಭಾವ್ ಕರಿನಸ್ತಾನಾ ಎಕುಚ್ ಮಾಪಾನ್ ನಿತ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:11
14 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.


ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.


ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.


ಅವರು ಯೇಸುವಿಗೆ, “ಗುರುವೇ, ನೀವು ಮುಖ ದಾಕ್ಷಿಣ್ಯವಿಲ್ಲದೆ ಸರಿಯಾಗಿ ಬೋಧಿಸುತ್ತೀರಿ ಮತ್ತು ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವರಾಗಿದ್ದೀರೆಂದು ನಾವು ಬಲ್ಲೆವು.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು