Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:22 - ಕನ್ನಡ ಸಮಕಾಲಿಕ ಅನುವಾದ

22 ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಾದರ ಮಾಡಬಾರದೆಂದು ಹೇಳುವ ನೀನು ಹಾದರ ಮಾಡುತ್ತೀಯೋ? ಮೂರ್ತಿಗಳಲ್ಲಿ ಅಸಹ್ಯಪಡುತ್ತಿರುವ ನೀನು ದೇವಸ್ಥಾನದಲ್ಲಿ ಕಳ್ಳತನ ಮಾಡುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜನರು ವ್ಯಭಿಚಾರವೆಂಬ ಪಾಪವನ್ನು ಮಾಡಕೂಡದೆಂದು ನೀನು ಹೇಳುವೆ, ಆದರೆ ನೀನೇ ಆ ಪಾಪಮಾಡಿ ಅಪರಾಧಿಯಾಗಿರುವೆ. ನೀನು ವಿಗ್ರಹಗಳನ್ನು ದ್ವೇಷಿಸುವೆ, ಆದರೆ ನೀನೇ ಅವುಗಳನ್ನು ಗುಡಿಗಳಿಂದ ಕದಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಿಯಾ “ವೆಭಿಚಾರ್ ಕರುನಕೊ” ಮನ್ತೆಯ್, ಖರೆ ತಿಯಾ ವೆಭಿಚಾರ್ ಕರಿನೆ ಕಾಯ್? ತಿಯಾ ಮುರ್ತಿಯಾಕ್ನಿ ವಿರೊದ್ ಕರ್‍ತೆ, ಖರೆ ತಿಯಾ ಗುಡಿಯಾನಿತ್ಲೆ ಲುಟಿ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:22
14 ತಿಳಿವುಗಳ ಹೋಲಿಕೆ  

“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.


ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.


ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.


ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು