Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:24 - ಕನ್ನಡ ಸಮಕಾಲಿಕ ಅನುವಾದ

24 ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮ್ಮ ದೆಸೆಯಿಂದ ಅನ್ಯಜನರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತದೆಂದು ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯೆಹೂದ್ಯರಾದ ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದ ಜನರು ದೇವರ ಹೆಸರಿಗೆ ವಿರೋಧವಾಗಿ ಮಾತಾಡುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಪವಿತ್ರ್ ಪುಸ್ತಕ್ ಮನ್ತಾ, “ಜುದೆವಾನು ತುಮ್ಕಾ ಲಾಗುನ್ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ವಿಶಯಾತ್ ಬುರ್ಶೆ ಬೊಲ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:24
11 ತಿಳಿವುಗಳ ಹೋಲಿಕೆ  

“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.


ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.


ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.


ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.


ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.


ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು