ರೋಮಾಪುರದವರಿಗೆ 2:27 - ಕನ್ನಡ ಸಮಕಾಲಿಕ ಅನುವಾದ27 ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಅಶೆ ತುಮಿ ಖಾಯ್ದೆ ಲಿವ್ನ್ ಘೆವ್ನ್ ಅನಿ ಸುನ್ನತ್ ಕರುನ್ ಘೆವ್ನ್ ರ್‍ಹಾಲ್ಯಾರ್‍ಬಿ ಖಾಯ್ದೆ ಮೊಡ್ತ್ಯಾಶಿ, ಅನಿ ತಸೆ ಮನುನ್ ಜುದೆವ್ ನ್ಹಯ್ ಹೊತ್ತಿ ಲೊಕಾ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಆಂಗಾನಿ ತೆನಿ ಸುನ್ನತ್ ಕರುನ್ ಘೆಟಲ್ಲೆ ನಸ್ಲ್ಯಾರ್‍ಬಿ ತೆನಿ ಖಾಯ್ದೆ ಬರೆ ಕರುನ್ ಪಾಳ್ತ್ಯಾತ್. ಅಧ್ಯಾಯವನ್ನು ನೋಡಿ |