Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೊ ಜುದೆವ್ ಮಟ್ಲ್ಯಾರ್, ಭುತ್ತುರ್‍ಲ್ಯಾ ಬಾಜುನ್ ಖರೊ ಹೊವ್ನ್ ರ್‍ಹಾವ್ಕ್ ಪಾಜೆ, ತೆಚೊ ಮನ್ ಸುನ್ನತ್ ಕರಲ್ಲೊ ರ್‍ಹಾತಾ, ಅನಿ ಹೆ ದೆವಾಚ್ಯಾ ಆತ್ಮ್ಯಾಚೆ ಕಾಮ್, ಲಿವಲ್ಲ್ಯಾ ಖಾಯ್ದ್ಯಾಚೆ ಕಾಮ್ ನ್ಹಯ್ ಹೆ ಅಸ್ಲ್ಯಾ ಮಾನ್ಸಾಕ್ ದೆವಾಕ್ನಾ ಶಬಾಸ್ಕಿ ಗಾವ್ತಾ, ಮಾನ್ಸಾನಿಕ್ನಾ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:29
27 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.


ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.


ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.


‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ,” ಎಂದರು.


ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ. ಅವಳ ವಸ್ತ್ರವು ಚಿನ್ನದಿಂದ ನೇಯ್ದಿದೆ.


“ಇಗೋ, ನಾನು ಸುನ್ನತಿ ಇಲ್ಲದವರ ಸಂಗಡ ಸುನ್ನತಿ ಉಳ್ಳವರೆಲ್ಲರನ್ನೂ, ಈಜಿಪ್ಟನ್ನೂ, ಯೆಹೂದವನ್ನೂ, ಎದೋಮನ್ನೂ, ಅಮ್ಮೋನನ ಮಕ್ಕಳನ್ನೂ, ಮೋವಾಬನ್ನೂ, ಮರುಭೂಮಿಯ ನಿವಾಸಿಗಳಾಗಿರುವ ಕಟ್ಟಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿವಸಗಳು ಬರುತ್ತವೆ. ಏಕೆಂದರೆ ಈ ಜನಾಂಗಗಳವರು ಸುನ್ನತಿಯಿಲ್ಲದವರು. ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿ ಇಲ್ಲದವರಾಗಿದ್ದಾರೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ಹಾಗಾದರೆ ಯೆಹೂದ್ಯರಾಗಿರುವುದರಿಂದ ಪ್ರಯೋಜನವೇನು? ಅಥವಾ ಸುನ್ನತಿಯಿಂದ ಲಾಭವೇನು?


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು