ರೋಮಾಪುರದವರಿಗೆ 3:21 - ಕನ್ನಡ ಸಮಕಾಲಿಕ ಅನುವಾದ21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ಅತ್ತಾ ಲೊಕಾಕ್ನಿ ಖಾಯ್ದೆ ನಸ್ತಾನಾ ಭಕ್ತಿವಂತ್ ಮನುನ್ ದಾಕ್ವುನ್ ದಿತಲಿ ವಾಟ್ ದೆವಾನ್ ಅಪ್ನಿಚ್ ದಾಕ್ವುನ್ ದಿಲ್ಯಾನಾಯ್. ಹೆಕಾ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದಿ ಸೈತ್ ಅಪ್ನಾಚಿ ಸಾಕ್ಷಿ ದಿತ್ಯಾತ್. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.